Breaking News

ಪರಿಹಾರದ ಚೆಕ್ ವಿತರಣೆ

Spread the love

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ.

ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಹಿರಿಯರು, ಸುಕುಮಾರ ಪಾಟೀಲ, ಮಹಾವೀರ ಬೆಲ್ಲದ, ಮಹಾವೀರ ಪಾಟೀಲ, ಶಾಂತು ಬೆಲ್ಲದ, ಕಿರಣ ಹನಮಂತಾಚೆ, ಸುಕುಮಾರ ಹುಡೆದ, ಸಿದ್ದು ತುರಂಗಿ, ಸಾಗರ ಕಾಮನಾಚೆ, ಜ್ಯೋತಿಬಾ ಚೌಗುಲೆ, ಪಿರಾಜಿ ಜಾಧವ್, ಬಾಳು ಕಾಮತಿ, ಪ್ರಶಾಂತ ಶಟವಾಜಿ ಇದ್ದರು.

 


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ