Breaking News
Home / new delhi / ಒಳಚರಂಡಿ ಪೈಪ್‌ಲೈನ್‌ ಒಡೆದು ಕಲುಷಿತ ನೀರು ಸಂಗ್ರಹ

ಒಳಚರಂಡಿ ಪೈಪ್‌ಲೈನ್‌ ಒಡೆದು ಕಲುಷಿತ ನೀರು ಸಂಗ್ರಹ

Spread the love

ಬೆಳಗಾವಿ: ಮೂರು ದೇವಸ್ಥಾನಗಳು ಇರುವ ಈ ಪ್ರದೇಶದಲ್ಲಿ ಒಳಚರಂಡಿ ಪೈಪ್‌ಲೈನ್‌ ಒಡೆದು ಕಲುಷಿತ ನೀರು ರಸ್ತೆ ಮೇಲೆ
ಹರಿಯುತ್ತಿರುವುದರಿಂದ ಸ್ಥಳೀಯರು ಕೆಲ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಮಧ್ಯ ಭಾಗದಲ್ಲಿರುವ ಸೋಮವಾರ ಪೇಟೆಯಲ್ಲಿ ಮೂರು ದೇವಸ್ಥಾನಗಳ ನಡುವೆ ಒಳಚರಂಡಿ ಇದ್ದು, ಇದರ ಪೈಪ್‌ಲೈನ್‌ ಒಡೆದು ಹೋಗಿದ್ದರಿಂದ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಇಲ್ಲಿ ನಡೆದುಕೊಂಡು ಹೋಗುವುದು ಸ್ಥಳೀಯರಿಗೆ ಕಷ್ಟದ ಕೆಲಸವಾಗಿದೆ.

ಪೈಪ್‌ಲೈನ್‌ ಒಡೆದು ಗಜೀಲು ರಸ್ತೆಗೆ ಹರಿಯುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮೂಗು
ಮುಚ್ಚಿಕೊಂಡು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಆರೋಗ್ಯ ವಿಭಾಗಕ್ಕೆ ಮನವಿ ಸಲ್ಲಿಸಿದರೂ ಯಾರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ನಿತ್ಯ ಈ ಮೂರೂ ದೇವಸ್ಥಾನಗಳಿಗೆ ಬರಬೇಕಾದರೆ ಚರಂಡಿ ನೀರಿನಲ್ಲಿಯೇ ನಡೆದುಕೊಂಡು ಬರುವಂತಾಗಿದೆ. ವಾಹನಗಳು
ಓಡಾಡುತ್ತಿರುವುದರಿಂದ ದೇವಸ್ಥಾನದ ಗೋಡೆಗಳ ಮೇಲೂ ಈ ಗಲೀಜು ನೀರು ಸಿಡಿಯುತ್ತಿದೆ. ಕೂಡಲೇ ಕೂಡಲೇ ಮಹಾನಗರ
ಪಾಲಿಕೆ ಅ ಧಿಕಾರಿಗಳು ಇತ್ತ ಗಮನಹರಿಸಿ ಒಳಚರಂಡಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸೋಮವಾರ ಪೇಟೆ ಸುತ್ತಲಿನ ಜನರಿಗೆ ಈ ಕಿರಿಕಿರಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿತ್ಯ ತೊಂದರೆ ಪಡುವಂತಾಗಿದೆ. ಮಕ್ಕಳು, ಮಹಿಳೆಯರು ಓಡಾಡುವುದೇ ಕಷ್ಟಕರವಾಗಿದೆ. ಪಾಲಿಕೆ ಅಧಿಕಾರಿಗಳಾಗಲೀ ಅಥವಾ ಜನಪ್ರತಿನಿಧಿಗಳಾಗಲೀ ಇತ್ತ ನಿರ್ಲಕ್ಷವಹಿಸಿದ್ದಾರೆ ಎಂದು ದೂರಿದರು.

ಮಹಾನಗರ ಪಾಲಿಕೆ ಚುನಾವಣೆ ಬಂದಾಗ ಮಾತ್ರ ವೋಟ್‌ ಕೇಳಲು ಅಭ್ಯರ್ಥಿಗಳು ಬರುತ್ತಾರೆ. ಆದರೆ ನಂತರದ ದಿನಗಳಲ್ಲಿ ಇತ್ತ ಯಾರೂ ಗಮನ ಹರಿಸುವುದಿಲ್ಲ. ಪಾಲಿಕೆಯವರಂತೂ ತಮ್ಮ ಕೆಲಸ ಮಾಡಿ ಹೋಗುತ್ತಾರೆ. ಏನಾದರೂ ಸಮಸ್ಯೆಯಾದರೆ ಕೇಳಲು ಹೋದವರಿಗೆ ಭರವಸೆ ನೀಡಿ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬೆಳಗಾವಿಯನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಂಥ ಗಲೀಜು ನೀರು ಕಾಣಿಸುವುದಿಲ್ಲ. ಎಲ್ಲಿ ನೋಡಿದರಲ್ಲಿ ಚರಂಡಿ ನೀರು ನಿಂತಿದ್ದರಿಂದ ಸೊಳ್ಳೆ, ಕೀಟಗಳ ಹಾವಳಿಯೂ ಹೆಚ್ಚಾಗಿದೆ. ಇದರು ಜನರ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಪೈಪ್‌ಲೈನ್‌ ದುರಸ್ತಿ ಮಾಡಬೇಕು. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ರಸ್ತೆ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಳಚರಂಡಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ