Breaking News

‘ಲಿಂಗಾಯತ’ ಜಾತಿ ಪ್ರಮಾಣಪತ್ರಕ್ಕೆ ಆಗ್ರಹ

Spread the love

ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು.

‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಬಸವ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೆ.

ಬಸವರಾಜ, ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಗುಡಸ ಮತ್ತು ಉಪಾಧ್ಯಕ್ಷ ಮಾರಯ್ಯ ಗಡಗಲಿ ಇದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ