Breaking News

ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್‌ಗೆ ಬಿ.ಸಿ.ಪಾಟೀಲ ಪ್ರಶ್ನೆ

Spread the love

ಬೆಳಗಾವಿ: ‘ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’

‘ಆರ್‌ಎಸ್‌ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ.

‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ‍್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು.

‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ ಇಲ್ಲ. ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರಬೇಕಾಗುತ್ತೆ ಎಂದು ಆ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಅವರೇ ಹೇಳಿದ್ದಾರೆ.

ಕೋವಿಡ್-19 ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿಲ್ಲ’ ಎಂದರು.

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೀಸನಲ್‌ ರಾಜಕಾರಣಿ. ಆಗಾಗ, ಮಾಫಿಯಾಗಳ ಬಗ್ಗೆ ಮಾತನಾಡುತ್ತಿರುತ್ತಾರೆ. ನನ್ನ ಸರ್ಕಾರ ಬೀಳಲು ಡ್ರಗ್ಸ್‌ ಮಾಫಿಯಾದ ಹಣ ಕಾರಣ ಎಂದಿರುವ ಅವರು, ಅಧಿಕಾರದಲ್ಲಿದ್ದಾಗ ಕ್ರಮ ಕೈಗೊಳ್ಳಲಿಲ್ಲವೇಕೆ?’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

Spread the loveಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ