ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು ಕಾಲ ಕಳೆಯುತ್ತಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??