ವಿಶ್ವಕರ್ಮ ಸಮುದಾಯ ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು: ಸತೀಶ ಜಾರಕಿಹೊಳಿ
ಬೆಳಗಾವಿ: ವಿಶ್ವಕರ್ಮ ಸಮುದಾಯದವರು ಸಾಮಾಜಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿ್ದರು.
ಸಮೀಪದ ಹೊನಗಾ ಗ್ರಾಮದಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಾವುದೇ ಸಮುದಾಯ ಬೆಳೆಯಲು ಶಿಕ್ಷಣ ಪ್ರಾಮುಖ್ಯತೆ ವಹಿಸುತ್ತಿದೆ. ಹೀಗಾಗಿ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸಬೇಕು ಎಂದ ಅವರು ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯವಾಗಿ ಮುಂದೆ ಬರಬೇಕು ಎಂದರು. ಸಮುದಾಯದ ಸಮಸ್ಯೆಗಳನ್ನು ಮತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮಟ್ಟಿಗೆ ಚರ್ಚಿಸುತ್ತೇನೆ ಎಂದು ಇದೇ ವೇಳೆ ಭರವಸೆ ನೀಡಿದರು.
ಮುಕ್ತಿಮಠದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಉಪಾಧ್ಯಕ್ಷೆ ಅರುಣ ಕಟಾಂಬಳೆ, ಸದಸ್ಯ ಸಿದ್ದು ಸುಣಗಾರ, ಆನಂದ ಪಾಟೀಲ ಸೇರಿ ಸಮಾಜದ ಪ್ರಮುಖರು ಇದ್ದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
Laxmi News 24×7