Breaking News

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ.

ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ.
* ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು.
* ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖವಾಗಿದೆ.
* ಜಲಾಶಯಗಳಲ್ಲಿ ಹೂಳು ತುಂಬಲು ಹಾಗೂ ನೀರು ಸಂಗ್ರಹ ಪ್ರಮಾಣ ಕಡಿಮೆಗೆ ಒತ್ತುವರಿಯೇ ಕಾರಣ.
* ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು.
* ಅಗತ್ಯತೆ ಆಧರಿಸಿ ಸಮೀಕ್ಷೆ ಬಳಿಕ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ತೀರ್ಮಾನ
* ಸಭೆಯ ವರದಿ ಆಧರಿಸಿ ಈಗಾಗಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಾಥಮಿಕ ಸಮೀಕ್ಷೆ ನಡೆಸಿದ್ದಾರೆ.
* ಸಮಗ್ರ ಸಮೀಕ್ಷೆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಶಾಶ್ವತ ಪರಿಹಾರ ರೂಪಿಸಲಾಗುವುದು.
* ನದಿಪಾತ್ರದ ಅತಿಕ್ರಮಣ ಆಗಿರುವುದು ಸತ್ಯ. ಒತ್ತುವರಿ ತೆರವುಗೊಳಿಸಿದರೆ ಪ್ರವಾಹ ನಿಯಂತ್ರಣ ಸಾಧ್ಯ.
* ಕಳಸಾ-ಬಂಡೂರಿ ಕುರಿತು ಸಿಎಂ ಕೂಡ ಚರ್ಚೆ ನಡೆಸಿದ್ದಾರೆ.
* ಸಂಪುಟ ವಿಸ್ತರಣೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ