Breaking News
Home / new delhi / ಆರ್‌ಸಿಯುಗೆ 126 ಎಕರೆ ಮಂಜೂರು.

ಆರ್‌ಸಿಯುಗೆ 126 ಎಕರೆ ಮಂಜೂರು.

Spread the love

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ.

‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ 38 ಎಕರೆ 28 ಗುಂಟೆ ಜಮೀನನ್ನು ಭೂಕಂದಾಯ ನಿಯಮಗಳ ಅನ್ವಯ ನೀಡಲಾಗಿದೆ. ಮಾರುಕಟ್ಟೆ ದರದ ಶೇ 50ರಷ್ಟು ದರ ಮತ್ತು ನಿಯಮಾನುಸಾರ ಇತರೆ ಶುಲ್ಕಗಳನ್ನು ವಿಧಿಸಿ ವಿಶ್ವವಿದ್ಯಾಲಯದ ಕುಲಪತಿಗೆ ಮಂಜೂರು ಮಾಡಲಾಗಿದೆ’ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಇ. ಚನ್ನಬಸವರಾಜ ಆದೇಶ ಹೊರಡಿಸಿದ್ದಾರೆ.

ಇವು ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಿದ ಜಮೀನುಗಳಾಗಿವೆ. ವಿಶ್ವವಿದ್ಯಾಲಯಕ್ಕೆ ಸ್ವಂತ ಭೂಮಿ ಇಲ್ಲದೆ ಇರುವುದರಿಂದಾಗಿ ವೃತ್ತಿಪರ ಹಾಗೂ ಕೌಶಲವೃದ್ಧಿಸುವ ಹೊಸ ಕೋರ್ಸ್‌ಗಳನ್ನು ಆರಂಭಿಸಲು ಯಾವುದೇ ಕಟ್ಟಡಗಳನ್ನು ಹೊಂದದೆ ಇರುವುದರಿಂದ ಜಮೀನಿನ ಅಗತ್ಯವಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಈಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ನೀಡಲಾಗಿತ್ತು.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ