Breaking News

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ

Spread the love

ಬೆಳಗಾವಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ.

ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ.

ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ.

ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ