Breaking News
Home / ಜಿಲ್ಲೆ / ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಮೂವರು ಅಭ್ಯರ್ಥಿಗಳ ಹೆಸರು ಶಿಪಾರಸ್ಸು ಮಾಡಬೇಕು. ಸಮರ್ಥ ಅಭ್ಯರ್ಥಿ ನೇಮಕ ಮಾಡಲಾಗುವುದೆಂದರು.

ಇನ್ನೂ ಉಪಚುನಾವಣಗೆ ಸ್ಪರ್ಥಿಸುವ ವಿಚಾರವಾಗಿ ಮಾತನಾಡಿ, ವಯಕ್ತಿವಾಗಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ರಾಜ್ಯ, ಜಿಲ್ಲೆಯಲ್ಲಿಯೇ ಇನ್ನು ತುಂಬಾ ಕೆಲಸ ಮಾಡಬೇಕಾಗಿದೆ. ಆದರೆ ಉಪಚುನಾವಣೆಗೆ ನನ್ನ ಹೆಸರು ಕೇಳಿ ಬಂದಿದೆ ಎಂದು ತಿಳಿಸಿದರು.

ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ. ಸಮುದಾಯ ಹಾಗೂ ನಿಗಮ ಮಂಡಳಗಳಿಗೆ ಬೋಡ್೯ ಮಾಡಿರುವುದರಕ್ಕೆ ವಿರೋಧ ಇಲ್ಲ. ಅದನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕಿತ್ತು ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್ ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ