Breaking News

ವೀರಶೈವ ಮಹಾಸಭಾ ಯುವ ಘಟಕಕ್ಕೆ ಸುರೇಶ ಅಂಗಡಿ ಅಣ್ಣನ ಮಗ

Spread the love

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ದೊರೆಯುವಂತೆ ಮಾಡುವುದು ಮತ್ತು ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದು ಸೇರಿದಂತೆ ವೀರಶೈವ ಬಾಂಧವರ ಉನ್ನತಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ವೀರಶೈವ ಮಹಾಸಭಾದ ಎಲ್ಲ ಪದಾಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಚೇತನ ಅಂಗಡಿ ಅವರನ್ನು ಯುವ ಘಟಕಕ್ಕೆ ನೇಮಕಗೊಳಿಸಿರುವುದಾಗಿ ರತ್ನಪ್ರಭಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ