ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, 11.30 ಗಂಟೆಗೆ ಪೊಲೀಸ್ ಕಮೀಷನರ್ ಕಾರ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ಮೂಲಕ ಕಿತ್ತೂರಗೆ ತೆರಳಿ ಸಂಜೆ 4 ಗಂಟೆಗೆ ಪೊಲೀಸ್ ಸಿಬ್ಬಂದಿ ವಸತಿ ಗೃಹ ಉದ್ಘಾಟನೆ. ಸಂಜೆ 6 ಗಂಟೆಗೆ ಧಾರವಾಡ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿದ್ದಾರೆ.
Laxmi News 24×7