Breaking News

LPG ಗ್ರಾಹಕರಿಗೆ ಶಾಕ್: ಸಿಲಿಂಡರ್ ದರ 55 ರೂ. ಹೆಚ್ಚಳ

Spread the love

ನವದೆಹಲಿ: ಕಚ್ಚಾತೈಲದ ಬೆಲೆ ಏರಿಕೆಯಾಗಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾದಿಯಲ್ಲಿದೆ. ಅದೇ ರೀತಿ ಎಲ್ಪಿಜಿ ಗ್ರಾಹಕರಿಗೂ ಕೂಡ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಬದಲಾವಣೆ ಮಾಡಿಲ್ಲ.

ಜುಲೈನಲ್ಲಿ 14.2 ಕೆಜಿ ಗೃಹ ಬಳಕೆ ಸಿಲಿಂಡರ್ ದರ ಪರಿಷ್ಕರಿಸಿದ್ದು, 4 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಅದಕ್ಕಿಂತ ಹಿಂದೆ ಮೇ ನಲ್ಲಿ 162 ರೂಪಾಯಿ ಕಡಿಮೆ ಮಾಡಲಾಗಿತ್ತು. ಈಗ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 55 ರೂ. ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ದರ 594 ರೂಪಾಯಿ ಇದೆ.

 

 

 

19 ಕೆಜಿ ಸಿಲಿಂಡರ್ ಬೆಲೆ 55 ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 1296 ರೂ., ಕೊಲ್ಕತ್ತಾದಲ್ಲಿ 1351 ರೂ., ಚೆನ್ನೈನಲ್ಲಿ 1410 ರೂ., ಮುಂಬೈನಲ್ಲಿ 1244 ರೂಪಾಯಿ ದರ ಇದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ