ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ.