Breaking News

ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು.

ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ: ಸರ್ಕಾರಿ ಕಟ್ಟಡಗಳು ಹಾವು, ಚೇಳುಗಳಿಗೆ ಮೀಸಲು

Spread the love ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಹಲವು ಸರ್ಕಾರಿ ಕಟ್ಟಡಗಳು ಖಾಲಿ ಬಿದ್ದಿವೆ. ಮಾತ್ರವಲ್ಲ; ಹಲವು ಕಟ್ಟಡಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ