Breaking News

ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ

Spread the love

 

 

 

ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ

ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೃತ ಬಸ್ ಚಾಲಕ ದತ್ತಾ ಮಂಡೋಳ್ಕರ್(58)ಗೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವು ಕಾಣಿಸಿಕೊಂಡಿದ್ದರಿಂದ ರಾತ್ರಿಯೇ ಮನೆಗೆ ತೆರಳಿದ್ದ.

ಆದ್ರೆ ಹೃದಯಾಘಾತವಾಗಿ ಬಸ್ ಚಾಲಕ ಕೊನೆಯುಸಿರೆಳೆದಿದ್ದಾರೆ. ಬೆಳಗಾವಿಯ 2ನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಬಸ್ ಚಾಲಕ ದತ್ತಾ ಮಂಡೋಳ್ಕರ್ ನಿನ್ನೆಯವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ