Breaking News

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

Spread the love

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.

ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು.

ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. ಇವರ ದೂರವಾಣಿ ಸಂಖ್ಯೆ 9480881000 ಹಾಗೂ ಇವರ ಇ-ಮೇಲ್ : obsblgep20@yahoo.com ಇರುವುದು.

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂದಪಟ್ಟಂತೆ ಯಾವುದಾದರೂ ದೂರುಗಳು ಇದ್ದಲ್ಲಿ ಚುನಾವಣಾ ವೀಕ್ಷಕರನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ