ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ.
ಅಪಘಾತ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಗ್ಯ ಅಧಿಕಾರಿಗಳಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7