Breaking News

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

Spread the love

ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ  ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ.
ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ.
ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂದು ಆಶಿಸಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸೀತಾರಾಮ್ ಅವರಿಗೆ ಶುಭಾಶಯ ಕೋರಿದ್ದಾರೆ.

Spread the love

About Laxminews 24x7

Check Also

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

Spread the loveರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ (Aನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ