ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ.

ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂದು ಆಶಿಸಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸೀತಾರಾಮ್ ಅವರಿಗೆ ಶುಭಾಶಯ ಕೋರಿದ್ದಾರೆ.