ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.
‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.