Breaking News

ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ

Spread the love

ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

 

ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ ಕಾಣಿಸಿದೆ. ಆದರೆ ಅವರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ.

 

ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದಾರೆ. ಸಚಿವರು, ಸಂಸದರು, ಶಾಸಕರು ಎಲ್ಲರಿಗೂ ಈಗ ಆತಂಕ ಶುರುವಾಗಿದೆ. ಅವರೆಲ್ಲರೂ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿದೆ. ಜೊತೆಗೆ ಅವರ ಚಾಲಕರು, ಸಹಾಯಕರು ಸಹ ಆತಂಕಕ್ಕೊಳಗಾಗಿದ್ದಾರೆ.

 

ಕಾಡಾ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಬೈಲಹೊಂಗಲದ ವಿಶ್ವನಾಥ ಪಾಟೀಲ ಅವರಿಗೆ 3 -4 ದಿನದ ಹಿಂದೆಯೇ ಕೊರೋನಾ ಪಾಸಿಟಿವ್ ಬಂದಿದೆ. ಅವರು ಹೋಮ್ ಐಸೋಲೇಶನ್ ನಲ್ಲಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ