ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು , ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??