Breaking News

ಡ್ರಗ್ಸ್‌ ದಂಧೆಗೆ ಕಡಿವಾಣ: ಆಗ್ರಹ

Spread the love

ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಮರ್ಪಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ತನಿಖೆಯ ವಿಷಯದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು’ ಎಂದು ಆಗ್ರಹಿಸಿದರು.

ಮಹಾನಗರ ಘಟಕದ ಕಾರ್ಯದರ್ಶಿ ಕಿರಣ ದುಕಾನದಾರ್, ರೋಹಿತ್ ಉಮನಾಬಾದಿಮಠ, ಅಶ್ವಿನಿ ಕಂಚಿ, ಎಸ್. ಕಾರ್ತಿಕ ಇದ್ದರು.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ