ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.
ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.