Breaking News

ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Spread the love

ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್​ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ಪತ್ನಿ ಅನಿತಾ, ತನ್ನ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ಸಚಿನ್​ ಸದಾಶಿವ ಭೋಪಳೆ (35) ಈತನನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬಳಿಕ ತನ್ನ ಸಹೋದರ ಹಾಗೂ ಸಹೋದರಿಯರ ಸಹಾಯದಿಂದ ರಾತ್ರೋರಾತ್ರಿ ಎಮ್ಮೆ ಸತ್ತಿದೆ ಎಂದು ಜೆಸಿಬಿ ಮೂಲಕ ಗುಂಡಿ ತೋಡಿಸಿ, ಶವವನ್ನು ಹೂತು ಪರಾರಿಯಾಗಿದ್ದರು.

ಘಟನೆ ಕುರಿತು ಸಂಶಯ ವ್ಯಕ್ತಪಡಿಸಿದ್ದ ಜೆಸಿಬಿ ಡ್ರೈವರ್‌ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶನಿವಾರ ಮಾಹಿತಿ ಪಡೆದಿದ್ದ ನಿಪ್ಪಾಣಿ ಪೊಲೀಸರು ಹಾಗೂ ಡಿವೈಎಸ್ಪಿ ಮನೋಜ್ ಕುಮಾರ್​ ನೇತೃತ್ವದ ತಂಡ, ಪ್ರಕರಣ ಕೈಗೆತ್ತಿಕೊಂಡ ಒಂದೇ ದಿನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ