ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ.
ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ ಸಮಿತಿ ಸಭೆಯನ್ನು ಘಟಪ್ರಭಾದಲ್ಲಿ ನಡೆಸಲಿದ್ದಾರೆ.
Laxmi News 24×7