Breaking News

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

Spread the love

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತೆಯರು. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಶೀಘ್ರದಲ್ಲೇ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸುತ್ತೇವೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.

 


Spread the love

About Laxminews 24x7

Check Also

ಬೆಳಗಾವಿ| ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ ಸುಗಮ

Spread the loveಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಗೊಂಡ ಪಿಯು ದ್ವಿತೀಯ ವರ್ಷದ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 33,174 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ