Breaking News

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

Spread the love

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು.

‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಗೊತ್ತಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ಜೋಡಿ ಕೊಲೆ ಘಟನೆಯಿಂದಾಗಿ ಬಡಾವಣೆಯ ಜನರು ಬೆಚ್ಚಿ ಬಿದ್ದಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್‌ ಹಾಗೂ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು.

‘ಕೊಲೆಗೆ ಖಚಿತ ಕಾರಣ ತಿಳಿದುಬಂದಿಲ್ಲ. ಅದರೆ, ಸುಳಿವು ಸಿಕ್ಕಿದೆ’ ಎಂದು ಆಯುಕ್ತರು ತಿಳಿಸಿದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ