ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ.
ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಹೋದ ವರ್ಷ ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಕೂಡಲೇ ಸಂತ್ರಸ್ತರೆಲ್ಲರಿಗೂ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ರಾಘವೇಂದ್ರ ನಾಯ್ಕ ನೇತೃತ್ವ ವಹಿಸಿದ್ದರು.