Breaking News
Home / new delhi / ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

Spread the love

ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

‘ನಗರದ ಟಿಳಕವಾಡಿಯಲ್ಲಿ ಪುನರ್‌ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು.

‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ ಕಲೆ ಹಾಗೂ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರಬೇಕು’ ಎಂದು ಒತ್ತಾಯಿಸಿದರು.

ಬಿ.ಎಸ್. ಗವಿಮಠ, ಸರಜೂ ಕಾಟ್ಕರ್, ಡಾ.ಬಸವರಾಜ ಜಗಜಂಪಿ, ಡಾ.ಗುರುದೇವಿ ಹುಲೆಪ್ಪನವರಮಠ, ಏಣಗಿ ಸುಭಾಷ್, ವಿ.ಜಿ. ಅಷ್ಟಗಿ, ರಾಮಕೃಷ್ಣ ಮರಾಠೆ ಇದ್ದರು.


Spread the love

About Laxminews 24x7

Check Also

ರಾಯಚೂರು | 19 ಪ್ರೌಢಶಾಲೆಯ ಎಲ್ಲರೂ ಉತ್ತೀರ್ಣ

Spread the love ರಾಯಚೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಯಚೂರು ರಾಜ್ಯದ 30 ಜಿಲ್ಲೆಗಳ ಸಾಲಿನಲ್ಲೂ ಗುರುತಿಸಿಕೊಂಡಿಲ್ಲ. ಜಿಲ್ಲೆಯ ಐದು ಶಾಲೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ