Breaking News

ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.

Spread the love

ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.

– ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ.

ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು.

‘ಪಕ್ಷ ನಿರ್ಧರಿಸಿದರೆ ನಾನು ಸ್ಪರ್ಧಿಸಲು ಸಿದ್ಧವಿದ್ದೇನೆ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ