Breaking News

ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ

Spread the love

 

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, ಪ್ರಾಥಮಿಕ ಸಂಘಗಳು ಎಲ್ಲ ಪಕ್ಷದವರು ಸೇರಿಕೊಂಡು ಆಡಳಿತ ನಡೆಸುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೊಸದನ್ನು ಏನೋ ಮಾಡಲು ಹೊರಟಿದ್ದಾರೆ. ಆದರೆ ವಿಶೇಷವೇನು ಆಗುವುದಿಲ್ಲವೆಂದರು.

ವಿಧಾನಸಭೆಯ ನಮ್ಮ ಮುಂದಿನ ಟಾರ್ಗೆಟ್ ಎಂದು ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬೆಳಗಾವಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಬಿಜೆಪಿ ಹೇಳಿರಬಹುದು. ಆದರೆ ಇನ್ನೂ ಎರಡೂವರೆ ವರ್ಷ ಅಧಿಕಾರ ಇದೆ. ದೇಶದಲ್ಲಿ, ರಾಜ್ಯದಲ್ಲಿ ಇನ್ನು ಏನೇನು ಬದಲಾವಣೆ ಆಗಲಿದೆ. ಮುಂದೆ ಇವರೇ ಯಾವ ಪಕ್ಷದಲ್ಲಿ ಇರುತ್ತಾರೋ ಗೊತ್ತಿಲ್ಲ. ಕಾದು ನೋಡೋಣ ಎಂದು ಹೇಳಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಂಧನ ರಾಜಕೀಯವಾಗಿದೆ. ಬಿಜೆಪಿಯವರು ಟಾರ್ಗೆಟ್ ಮಾಡುತ್ತನೆ ಇದ್ರು, ಅವರು ಯಶಸ್ವಿಯಾಗಿದ್ದಾರೆ. ಆದರೆ ಈಗ ಆ ವಿಚಾರವಾಗಿ ಆರೋಪ ಮಾಡುವುದರಿಂದ ಏನು ಪ್ರಯೋಜನವಿಲ್ಲ. ಕೋರ್ಟ್ ತೀರ್ಪು ಅಂತಿಮ ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ