Breaking News
Home / new delhi / ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

Spread the love

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ ಹೈಪವರ್ ಮೀಟಿಂಗ್ ಆಗಿದೆ. ಸಂದೇಶ ಏನಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು. ನರೇಂದ್ರ ಮೋದಿ ಅವರು ಪಕ್ಷದ ದೃಷ್ಟಿಯಿಂದ ಮೋದಿ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕದ ದೃಷ್ಟಿಯಿಂದ ಮೋದಿ ಅವರು ಒಳ್ಳೆಯ ನಿರ್ಣಯವನ್ನೇ ತೆಗೆದುಕೊಳ್ಳಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ರಾಜ್ಯಕ್ಕೆ ಚುನಾವಣಾ ಸಿದ್ಧತೆಗಾಗಿ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ. ವರಿಷ್ಠರ ಸಭೆ ನಡೆಸಿ, ಮುಂದಿನ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ, ಕೇಳಿ ಬಂದಿರುವ ಆರೋಪಗಳು ಮತ್ತು ಇತ್ತೀಚಿನ ಬೆಳವಣಿಗೆಗಳಿಂದ ಪಕ್ಷಕ್ಕೆ ಹಿನ್ನಡೆಯಾಗದಂತೆ ಯಾವ ಕ್ರಮ ಕೈಗೊಳ್ಳಬಹುದು ಎಂದು ಚಿಂತನೆ ನಡೆಸಲು ವರಿಷ್ಠರು ರಾಜ್ಯಕ್ಕೆ ಬರುತ್ತಿದ್ದಾರೆ ಎಂದರು. ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ಮೇ 10ರ ಒಳಗೆ ಪಕ್ಷವು ಅಗತ್ಯ ನಿರ್ಧಾರ ತೆಗೆದುಕೊಳ್ಳಬಹುದು. ಪ್ರಧಾನಿ ವಿದೇಶ ಪ್ರವಾಸ ಮುಗಿಸಿ ಬಂದ ಎರಡೇ ದಿನಗಳಲ್ಲಿ ಈ ಬಗ್ಗೆ ಪಕ್ಷದ ನಿರ್ಧಾರ ಪ್ರಕಟವಾಗಬಹುದು ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಬಗ್ಗೆ ಡಿಕೆಶಿ‌ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಭಯವಿದೆ. ಬೇರೋಬ್ಬರು ಸಿಎಂ ಆದರೆ ಜೈಲಿಗೆ ಹೋಗಬೇಕಾದೀತು ಎಂದು ಹೆದರಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

Spread the loveವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ! ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ