ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ.
ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾರಿ ಹೋಗಿದ್ದು, ಮಹಂತೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.