Breaking News

ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ.

ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್​ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ಹಾರಿ ಹೋಗಿದ್ದು, ಮಹಂತೇಶ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

Spread the loveಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ