Breaking News

ಜನಸಂಕಲ್ಪ ಯಾತ್ರೆ | ಇಂದು ಕುಣಿಗಲ್‌ನಲ್ಲಿ ಸಮಾವೇಶ, ಸಿಎಂ ಭಾಗಿ

Spread the love

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 156 ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಸಮಾವೇಶ ತುಮಕೂರು ಕ್ಷೇತ್ರದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದರಲ್ಲಿ ಭಾಗವಹಿಸಲಿದ್ದಾರೆ.

 

ಬೃಹತ್‌ ಸಮಾವೇಶದ ಮೂಲಕ ಮತ ಕ್ರೋಡೀಕರಣಕ್ಕೆ ಬಿಜೆಪಿ ಪ್ಲಾನ್‌ ಮಾಡಿದ್ದು, ಸೋತ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಲೆಕ್ಕಾಚಾರ ಹಾಕಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಬಳಿಕ ಕುಣಿ‌ಗಲ್‌ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ.

 

ಇಂದು ಬೆಳಗ್ಗೆ 9.30ಕ್ಕೆ ಜಕ್ಕೂರು ಏರೋಡ್ರೋಮ್ ಮೂಲಕ ಸಿಎಂ ಪ್ರಯಾಣ ಮಾಡಲಿದ್ದು, 10.05ಕ್ಕೆ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉದ್ಘಾಟಿಸಲಿದ್ದಾರೆ. 11.30ಕ್ಕೆ ತುಮಕೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ 12.10ಕ್ಕೆ ಕುಣಿಗಲ್‌ನಲ್ಲಿ ಜನಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮುದ್ದಹನುಮೇಗೌಡ ಸಮಾವೇಶದಲ್ಲಿ ಭಾಗಿಯಾಗಿ ಬಲ ಹೆಚ್ಚಿಸಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಕೊರಟಗೆರೆಯಲ್ಲಿ ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಭಾಗಿಯಾಗಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ. ಸಮಾವೇಶದಲ್ಲಿ ಮಾಜಿ ಸಿಎಂ ಬಿಎಸ್‌ವೈ, ಸಚಿವರು, ತುಮಕೂರು ಭಾಗದ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ