Breaking News
Home / ಜಿಲ್ಲೆ / ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ನೈತಿಕ, ಸಾಂವಿಧಾನಿಕ ಬಾಧ್ಯತೆ: RSS ನಿರ್ಣಯ ಅಂಗೀಕಾರ

ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ನೈತಿಕ, ಸಾಂವಿಧಾನಿಕ ಬಾಧ್ಯತೆ: RSS ನಿರ್ಣಯ ಅಂಗೀಕಾರ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಆರ್‌ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಎಎ ಜಾರಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ, ರಾಮ ಮಂದಿರ ನಿರ್ಮಾಣ ಹಸಿರು ನಿಶಾನೆಗೆ ಆರ್‌ಎಸ್ಎಸ್ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದೆ. ರಾಜಕೀಯ ಪಕ್ಷಗಳು ಸಿಎಎ ಬಗ್ಗೆ ಗೊಂದಲ ಸೃಷ್ಟಿಸುತ್ತಿವೆ. ಆದರೆ ಸಿಎಎ ಜಾರಿಗೆ ತಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಆರ್‌ಎಸ್ಎಸ್ ಕಾರ್ಯವಾಹಕ ಸುರೇಶ್ ಭೈಯಾಜೀ ಜೋಷಿ ಹೇಳಿದ್ದಾರೆ.

ಅಂದಹಾಗೆ ಬೆಂಗಳೂರು ಹೊರವಲಯದ ಜನಸೇವಾ ಕೇಂದ್ರದಲ್ಲಿ ಆರ್‌ಎಸ್ಎಸ್ ಅಖಿಲ ಭಾರತ ಪ್ರತಿನಿಧಿ ಸಭೆಯನ್ನು ರದ್ದುಗೊಳಿಸಲಾಗಿತ್ತು. ಕೊರೊನಾ ವೈರಸ್ ನಿಂದ ಹೆಚ್ಚು ಜನ ಸೇರಬಾರದು ಎಂದು ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಪ್ರತಿನಿಧಿ ಸಭೆ ರದ್ದುಗೊಳಿಸಲಾಗಿತ್ತು. ಆದರೆ ಆರ್‌ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆ ನಡೆಯಿತು. ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೂರು ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದೆ. ಸಿಎಎ ಜಾರಿ, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಗೆ ಸಂತಸ ವ್ಯಕ್ತಪಡಿಸಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ಎರಡು ನಿರ್ಣಯಗಳಾದ್ರೆ, ರಾಮನ ಜನ್ಮಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೀರ್ಪು ಕೊಟ್ಟಿರುವ ಸುಪ್ರೀಂಕೋರ್ಟ್ ತೀರ್ಪನ್ನು ಅಭಿನಂದಿಸಿ ನಿರ್ಣಯ ಕೈಗೊಂಡಿದ್ದಾರೆ.

ಆರ್‌ಎಸ್ಎಸ್ ಕಾರ್ಯಕಾರಿ ಮಂಡಳಿ 3 ನಿರ್ಣಯಗಳು:
* ಭಾರತ ಸಂವಿಧಾನವನ್ನು ಜಮ್ಮು ಕಾಶ್ಮೀರಕ್ಕೆ ವಿಸ್ತರಿಸಿದ್ದು ಮತ್ತು ಅದರ ಪುನಾರಚನೆ ಒಂದು ಶ್ಲಾಘನೀಯ ಹೆಜ್ಜೆ, ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ
* ರಾಮನ ಜನ್ಮಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ರಾಷ್ಟ್ರೀಯ ಅಭಿಮಾನದ ಸಂಕೇತ, ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂಕೋರ್ಟ್ ಗೆ ಅಭಿನಂದನೆ ಸಲ್ಲಿಕೆ
* ಭಾರತ ಪೌರತ್ವ ತಿದ್ದುಪಡಿ ಕಾಯ್ದೆ 2019, ಭಾರತದ ನೈತಿಕ ಮತ್ತು ಸಾಂವಿಧಾನಿಕ ಬಾಧ್ಯತೆ, ಸಿಎಎ ಜಾರಿಗೆ ತಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ


Spread the love

About Laxminews 24x7

Check Also

ಗುಜರಾತ್: ಗೌತಮ್ ಅದಾನಿ ಸಮ್ಮುಖದಲ್ಲಿ ಲ್ಯಾಕ್ಟೋಫೆರಿನ್ ಘಟಕ ಉದ್ಘಾಟಿಸಿದ ಶರದ್ ಪವಾರ್

Spread the love ವಾಸ್ನಾ (ಗುಜರಾತ್): ಗುಜರಾತ್​ನಲ್ಲಿ ದೇಶದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಂಟ್ ಎಕ್ಸ್‌ಮ್‌ಪವರ್​ಅನ್ನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ