Breaking News

ಕಾರಿನಲ್ಲೇ ಕ್ಯಾಬ್ ಚಾಲಕ ಅನುಮಾನಾಸ್ಪದ ಸಾವು – ಹೃದಯಾಘಾತ ಶಂಕೆ

Spread the love

ರಾಮನಗರ: ಕಸ್ಟಮರ್ ಡ್ರಾಪ್ ಮಾಡಿ ಕಾರಿನಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಕ್ಯಾಬ್ ಚಾಲಕನೊಬ್ಬ  ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರಿನ ಕೆ.ಪಿ.ಅಗ್ರಹಾರ ಮೂಲದ ಪುಷ್ಟರಾಜ್ (29) ಮೃತಪಟ್ಟ ಕ್ಯಾಬ್ ಚಾಲಕ. ಪುಷ್ಪರಾಜ್ ಗ್ರಾಹಕರನ್ನು ತಾವರೆಕೆರೆ ವ್ಯಾಪ್ತಿಗೆ ಡ್ರಾಪ್ ಮಾಡಿದ ನಂತರ, ಚಂದ್ರಪ್ಪ ಸರ್ಕಲ್ ಸಮೀಪದ ಲೇಔಟ್ ಒಂದರಲ್ಲಿ ಕಾರು ಪಾರ್ಕ್ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ. ಆದರೆ ಬೆಳಿಗ್ಗೆಯಿಂದಲೂ ಕಾರು ಒಂದೇ ಸ್ಥಳದಲ್ಲಿ ನಿಂತಿರುವುದನ್ನು ಕಂಡ ಸ್ಥಳೀಯರು ಅನುಮಾನಗೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನೊಳಗೆ ಚಾಲಕ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Spread the love

About Laxminews 24x7

Check Also

ಡಿಸೆಂಬರ್ – ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ: ಡಿಸಿಎಂ ಪರಮೇಶ್ವರ್‌

Spread the loveಬೆಂಗಳೂರು: ರಾಜ್ಯದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಯೋಜನೆಯಡಿ ಡಿಸೆಂಬರ್‌–ಜನವರಿಯಲ್ಲಿ ಮೊದಲ ಹಂತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ