Breaking News

ರೈತರ ಜಮೀನುಗಳಲ್ಲಿ ಕೇಬಲ್ ಕಳ್ಳತನ – ಇಬ್ಬರು ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

Spread the love

ಕೋಲಾರ: ಗ್ರಾಮೀಣ ಭಾಗದ ರೈತರ ಕೇಬಲ್ ಕಳ್ಳತನಮಾಡುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕು ದೊಡ್ಡಹಸಾಳ ಗ್ರಾಮದಲ್ಲಿಂದು ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ರೈತರ ಬೋರ್ ವೆಲ್‌ಗೆ  ಅಳವಡಿಸಿದ್ದ ಕೇಬಲ್ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರದ ಗಾಂಧಿನಗರ ನಿವಾಸಿಗಳಾದ ಚೇತನ್ ಹಾಗೂ ಸುದೀಪ್ ಕಳ್ಳತನ ಮಾಡುವ ವೇಳೆ ರೈತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಸದ್ಯ ಕಳ್ಳರನ್ನು ಹಿಡಿದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ. ಇನ್ನೂ ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಪದೇಪದೇ ಪಂಪ್ಸೆಟ್ ಹಾಗೂ ಕೇಬಲ್ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಆಗಿರಲಿಲ್ಲ. ಆದರೆ ಇಂದು ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಈ ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ