Breaking News

ಗ್ರಾಮೀಣ ಭಾಗದಲ್ಲಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸಲು ಕರೆ

Spread the love

ಬೆಳಗಾವಿ: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣದಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಹೀಗಾಗಿ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ  ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರು, ಎಂಬಿಕೆ ಮತ್ತು ಎಲ್‌ಸಿಆರ್‌ಪಿ ಸಂಪನ್ಮೂಲ ವ್ಯಕ್ತಿಗಳ, ಕೃಷಿ ಸಖಿ,  ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಬದ್ಧತೆಯಿಂದ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗ್ರಾಮೀಣ ಮಹಿಳೆಯರ ಶ್ರೇಯೋಭೀವೃದ್ಧಿ ಉದ್ದೇಶದಿಂತ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೂ ಸರ್ಕಾರದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳುವುದು, ಪ್ರಗತಿಯ ಪರಿಶೀಲನೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದು, ತನ್ಮೂಲಕ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಾಗುವಂತೆ ನೋಡಿಕೊಳ್ಳುವುದು ಈ ಸಭೆಯ ಉದ್ದೇಶವಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಗ್ರಾಮೀಣಾಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡು ಬಂದಿದೆ. ಗ್ರಾಪಂ ಜಾರಿ, ಗ್ರಪಂ ಬಲಗೊಳಿಸುವೆ, ಕೃಷಿ ಮತ್ತು ಪಶು ಸಹಾಯಕಿಯರ ನೇಮಕ, ಅಂಗನವಾಡಿಗಳ ಆರಂಭದಿಂದ ಈಗ ಗೃಹಲಕ್ಷ್ಮೀವರೆಗೆ ಎಲ್ಲವೂ ಕಾಂಗ್ರೆಸ್ ಸರ್ಕಾರ ಮಾಡಿದೆ. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಇದರ ಉದ್ದೇಶ. ಈ ದಿಸೆಯಲ್ಲಿ ಗ್ರಾಮ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಬದ್ಧತೆಯಿಂದ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ, ಕಾಡಾ ಅಧ್ಯಕ್ಷ ಯುವರಾಜ ಕದಂ, ಮನೋಹರ ಬಾಂಡಗಿ, ಬಾಳು ದೇಸೂರಕರ, ಸಿ.ಸಿ.ಪಾಟೀಲ, ಪಶು ಹಾಗೂ ಕೃಷಿ ಸಖಿಯರು ಇದ್ದರು.

Spread the love

About Laxminews 24x7

Check Also

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Spread the loveನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿ ಕೂಟ ನಿರ್ಧರಿಸಿದೆ. ವಿಪಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ