ಉಡುಪಿ: ಸಾಸ್ತಾನ ಟೋಲ್ ಬಳಿ ಆಟೋಗೆ ಕಾರು ಡಿಕ್ಕಿಯಾಗಿ ಕಮರಿಗೆ ಬಿದ್ದು ಹೊತ್ತಿ ಉರಿದಿದೆ.
ಡಿಕ್ಕಿಯಾಗುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕ್ಷಣಾರ್ಧದಲ್ಲೇ ಕಾರು ಧಗಧಗನೆ ಹೊತ್ತಿ ಉರಿದಿದೆ. ಈ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮಹಿಳೆ, ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7