Breaking News

ರಾಂಗ್ ರೂಟ್‌ನಲ್ಲಿ ಬಂದು ಕಾರು ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಬೀದರ್: ರಾಂಗ್ ರೂಟ್‌ನಲ್ಲಿ ಬಂದು ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ  ತಾಲೂಕಿನ ಹನುಮಂತ ವಾಡಿ ಗ್ರಾಮದ ಬಳಿ ನಡೆದಿದೆ.

ಬೆಲೂರು ನಿವಾಸಿ 33 ವರ್ಷದ ಶಿವಕುಮಾರ್ ಕೊಪಟೆ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. 

ಬೆಳಗಿನ ಜಾವ ಬೈಕ್ ಸವಾರ ಬಸವ ಕಲ್ಯಾಣದಿಂದ ಹುಮ್ನಾಬಾದ್ ಕಡೆ ಹೊರಟಿದ್ದರು. ಇದೇ ವೇಳೆ ರಾಂಗ್ ರೂಟ್‌ನಲ್ಲಿ ಬಂದ ಕಾರು ರಭಸವಾಗಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಯುವಕನ ನಿವಾಸದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿಯೂ ಸೂತಕದ ಛಾಯೆ ಮನೆ ಮಾಡಿದೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದೆ.


Spread the love

About Laxminews 24x7

Check Also

ಕೆರೆಗೆ ಬಿದ್ದಿದ್ದ ಹೋರಿ ರಕ್ಷಿಸಲು ಹೋಗಿ ಯುವಕ ಸಾವು

Spread the loveಶಿವಮೊಗ್ಗ: ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಹೋರಿ ರಕ್ಷಿಸಲು ಹೋಗಿ ಯುವಕನೊಬ್ಬ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಶಿಕಾರಿಪುರ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ