ದಾವಣಗೆರೆ: ಸಿಎನ್ಜಿ ಸಿಲಿಂಡರ್ ತುಂಬಿದ್ದ ಟ್ರಕ್ಗೆ ಕಾರು ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆಯ ಬಾಡ ಕ್ರಾಸ್ ಬಳಿ ನಡೆದಿದೆ.
ಸೃಜನ್ (16) ಅಪಘಾತದಲ್ಲಿ ಸಾವನ್ನಪ್ಪಿದ ಬಾಲಕ, ಈತ ಕಾರು ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ರಾಮ್ ತೇಜ್ ರೆಡ್ಡಿ (17), ಅಧಿತ್ಯ (16) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು. ಇವರೆಲ್ಲ ದಾವಣಗೆರೆಯ ಶಕ್ತಿ ನಗರ ಹಾಗೂ ಜೆಹೆಚ್ ಪಟೇಲ್ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ವೇಳೆ ಸಿಎನ್ಜಿ ಸಿಲಿಂಡರ್ ಬ್ಲಾಸ್ಟ್ ಆಗಿದ್ದರೆ ದೊಡ್ಡ ಪ್ರಮಾಣದ ಅನಾಹುತ ಆಗಿರುತ್ತಿತ್ತು. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಮೂವರು ಮನೆಯಲ್ಲಿದ್ದ ಕಾರನ್ನು ತೆಗೆದುಕೊಂಡು ರೌಂಡ್ಸ್ ಹೋಗಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದಾವಣಗೆರೆ ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7