Breaking News

ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ

Spread the love

ಚಿತ್ರದುರ್ಗ: ಲಾರಿಗೆ  ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ.

ಘಟನೆಯಲ್ಲಿ ಕಾರಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಸವರಾಜ್ (21) ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಟೈರ್ ಸಿಡಿದು ಧಿಡೀರ್ ಎಡಕ್ಕೆ ತಿರುಗಿದ ಪರಿಣಾಮ ಹಿಂದೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ