Breaking News

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ

Spread the love

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ.

ಹೊಸಕೋಟೆ  ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ