ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ.
ನವೀನ್ (33) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ನವೀನ್ ವಿಜ್ಞಾನ ನಗರದ ಸಿಗ್ನಲ್ನಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಮತ್ತೊಂದು ಕಾರು ಹಾಗೂ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಿಂದ 50 ಅಡಿ ದೂರು ಹಾರಿ ಬಿದ್ದು ಸವಾರ ಸಾವನ್ನಪ್ಪಿದ್ದಾನೆ. ನವೀನ್ ಕಟೀಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝೆಲ್ ಎನಿಸುವಂತಿದೆ.
ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, 63 ವರ್ಷದ ಕಾರು ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7