Breaking News

ಬೈಕ್‌ಗೆ ಸೈಡ್ ಕೊಡುವಾಗ ‌ಕಾಫಿ ತೋಟಕ್ಕೆ ಉರುಳಿದ ಕಾರು – ಐವರಿಗೆ ಗಾಯ

Spread the love

ಚಿಕ್ಕಮಗಳೂರು: ಬೈಕ್‌ಗೆ ಸೈಡ್ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು  ಕಾಫಿ ತೋಟಕ್ಕೆ ನುಗ್ಗಿ, ಪಲ್ಟಿಯಾಗಿರುವ  ಘಟನೆ ಕಳಸ  ತಾಲೂಕಿನ ಬೈನೇಕಾಡು ಹೋಮ್ ಸ್ಟೇ ಬಳಿ ನಡೆದಿದೆ. ‌ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವ್ಯಾಗನರ್ ಕಾರು ಹೊರನಾಡಿನಿಂದ ಉಡುಪಿ ಕಡೆ ಹೊರಟಿತ್ತು. ಈ ವೇಳೆ, ಬೈನೇಕಾಡು ಹೋಮ್ ಸ್ಟೇ ಬಳಿ ಎದುರಿನಿಂದ ಬಂದ ಬೈಕ್‌ಗೆ ಕಾರಿನ ಚಾಲಕ ಸೈಡ್ ಕೊಡುವಾಗ ಈ ಅವಘಡ ನಡೆದಿದೆ. ನಿರಂತರ ಮಳೆಯಿಂದ ನೆನೆದಿದ್ದ ರಸ್ತೆ ಬದಿಗೆ ಕಾರು ಇಳಿಯುತ್ತಿದ್ದಂತೆ ಸ್ಕಿಡ್ ಆಗಿ ಕಾಫಿ ತೋಟಕ್ಕೆ ನುಗ್ಗಿದೆ. ಕೂಡಲೇ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದ ರಸ್ತೆ ಬದಿಯಲ್ಲಿ ನೆಲ ನೆನೆದಿರುತ್ತದೆ. ಇದರಿಂದ ಅಪಘಾತ ಆಗುವ ಸಾಧ್ಯತೆ ಇರುತ್ತದೆ. ಎಚ್ಚರಿಕೆಯಿಂದ ವಾಹನ ಸವಾರರು ಸೈಡ್‌ ಕೊಡಬೇಕು ಎಂದು ಪೊಲೀಸರು ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ