Breaking News

ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಹರಿದ ಕಾರು – ಯುವಕ ಸಾವು, ಮಹಿಳೆಯ ಕಾಲು ಮುರಿತ

Spread the love

ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ  ನಿಂತಿದ್ದವರ ಮೇಲೆ ಕಾರು  ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ  ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು  ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್‌ಪಾತ್‌ಗೆ ನುಗ್ಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು

Spread the loveಮೈಸೂರು : ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಘಾತ ಮೂಡಿಸಿದೆ. ಸಾಲದ ಒತ್ತಡವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ