Breaking News

ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕಾರು – ಮೂವರು ಮಕ್ಕಳು ಸೇರಿ 8 ಮಂದಿ ಸಾವು

Spread the love

ಭೋಪಾಲ್: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳದಲ್ಲಿ ಕಾರು ಕೊಚ್ಚಿ ಹೋಗಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅಗರ್‌ಮಾಲ್ವಾ ಜಿಲ್ಲೆಯ ಮಾ ಬಾಗ್ಲಾಮುಖಿ ದೇವಸ್ಥಾನದ  ನಡೆದಿದೆ.

ಅವಘಡದಲ್ಲಿ ಓಡಿಶಾ  ಮೂಲದ ಇಬ್ಬರು ಮಹಿಳೆಯರು, ಮೂವರು ಪುರುಷರು ಹಾಗೂ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಉಜ್ಜಯಿನಿಯಿಂದ ಮಾ ಬಾಗ್ಲಾಮುಖಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ಆತುರದಲ್ಲಿ ಹೊಳೆ ದಾಟಲು ಯತ್ನಿಸಿದ್ದು, ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಘಟನೆಯ ಬಳಿಕ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಪೊಲೀಸರು ಮೃತರ ಗುರುತುಗಳನ್ನು ಪತ್ತೆ ಹಚ್ಚುತ್ತಿದ್ದಾರೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ